ಬೆಂಗಳೂರು, ಡಿ 01 (DaijiworldNews/AA): 'ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ' ಎಂದು ಬಿಜೆಪಿ ಪಕ್ಷ ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ್ದರು. ಇದೇ ಕಾರಣದಿಂದ ಇಂದು ಬೆಂಗಳೂರಿನ ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಬಿಜೆಪಿ ತನ್ನ ಅಧಿಕೃತ ಖಾತೆ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.