ನವದೆಹಲಿ, ಡಿ 2 (DaijiworldNews/HR): ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಇನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ವಿಚಾರಣೆ ಬಳಿಕ ಬಂಧಿಸಿದ್ದರು.