ಹೈದರಾಬಾದ್, ಡಿ 03(DaijiworldNews/AA): 4 ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ತೆಲಂಗಾಣ, ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಛತ್ತೀಸ್ಗಢದಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ.
ತೆಲಂಗಾಣದಲ್ಲಿನ ವಿಧಾನಸಭಾ ಚುನಾವಣೆಯ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್), ಕಾಂಗ್ರೆಸ್ (ಐಎನ್ಸಿ) ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ 66 ಸ್ಥಾನದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಆರ್ಎಸ್ 45 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ 3 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಮುನ್ನಡೆಯಾಗಿದ್ದು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಸ್ಪಷ್ಟವಾಗಲಿದೆ.
ಆಡಳಿತಾರೂಢ ಬಿಆರ್ಎಸ್ ಕೂಡ ‘ಕೈ’ ಪಡೆಗೆ ತೀವ್ರ ಪೈಪೋಟಿ ನೀಡುತ್ತಿರುವ ಕಾರಣ ಪಕ್ಷದ ಶಾಸಕರನ್ನು ಇತರ ಪಕ್ಷಗಳು ಸೆಳೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ಗೆ 70 ಸ್ಥಾನಗಳಿಗಿಂತ ಕಡಿಮೆಯಾದರೆ, ಗೆಲ್ಲುವ ಶಾಸಕರು ‘ಕೈ’ ತಪ್ಪದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಶಾಸಕರನ್ನು ಬೆಂಗಳೂರು ಅಥವಾ ಇನ್ನೊಂದು ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.