ಹೈದರಾಬಾದ್, ಡಿ 08 (DaijiworldNews/MR): ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಗುರುವಾರ ತಮ್ಮ ಎರವಳ್ಳಿ ಎಸ್ಟೇಟ್ನಲ್ಲಿ ಕಾಲು ಜಾರಿ ಬಿದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ನ ಯಶೋಧಾ ಆಸ್ಪತ್ರೆಯಲ್ಲಿ ಕೆಸಿಆರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
'ಬಿಆರ್ಎಸ್ ಅಧ್ಯಕ್ಷ ಕೆಸಿಆರ್ ಅವರಿಗೆ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ತಜ್ಞರ ಆರೈಕೆಯಲ್ಲಿದ್ದಾರೆ. ಹಿತೈಷಿಗಳ ಬೆಂಬಲ ಹಾಗೂ ಹಾರೈಕೆಯೊಂದಿಗೆ ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ' ಎಂದು ಕೆಸಿಆರ್ ಪುತ್ರಿ, ಎಂಎಲ್ಸಿ ಕೆ. ಕವಿತಾ ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರ ತಪಾಸಣೆ ಬಳಿಕ ಸೊಂಟದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇನ್ನಷ್ಟು ಪರೀಕ್ಷೆ ನಡೆಸಲು ಬಾಕಿ ಇದ್ದು ಆ ಬಳಿಕ ಶಸ್ತ್ರಚಿಕಿತ್ಸೆಯ ಅಗತ್ಯದ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ
ಕೆ.ಚಂದ್ರಶೇಖರ್ ರಾವ್ ಅವರು 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.