ನವದೆಹಲಿ, ಡಿ. 11 (DaijiworldNews/PC) : ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿಹಿಡಿದಿದೆ.
ಕೇಂದ್ರದ ಒಪ್ಪಿಗೆಯೊಂದಿಗೆ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ರಾಷ್ಟ್ರಪತಿಗಳು ಜಮ್ಮು ಕಾಶ್ಮೀರಕ್ಕೆ ಅನ್ವಯಿಸಬಹುದಿತ್ತು. ಮತ್ತು ರಾಜ್ಯ ವಿಧಾನಸಭೆಯ ಒಪ್ಪಿಗೆಯನ್ನು ಪಡೆಯುವ ಅಗತ್ಯವಿಲ್ಲ ಎಂದು ಸಿಜೆಐ ಚಂದ್ರಚೂಡ್ ಹೇಳಿದರು. ಈ ಮೂಲಕ ಅರ್ಜಿದಾರರ ವಾದವನ್ನು ಕೋರ್ಟ್ ತಿರಸ್ಕರಿಸಿದೆ. ಜಮ್ಮು ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿಯನ್ನು ಮರಳಿಸುವುದಕ್ಕಾಗಿ 2024ರ ಸೆಪ್ಟೆಂಬರ್ ಒಳಗೆ ವಿಧಾನಸಭೆ ಚುನಾವಣೆಯನ್ನು ನಡೆಸಬೇಕು. ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗನೆ ಪ್ರತಿಷ್ಠಾಪಿಸಬೇಕು ಎಂದು ಕೋರ್ಟ್ ಆದೇಶಿಸಿದೆ.
370ನೇ ವಿಧಿ ರದ್ದು ತಾತ್ಕಾಲಿಕ ನಿಬಂಧನೆ ಎಂದು ಸಿಜೆಐ ಹೇಳಿದ್ದಾರೆ. ಸಂವಿಧಾನ ರಚನಾ ಸಭೆಯ ವಿಸರ್ಜನೆಯ ನಂತರವೂ ರಾಷ್ಟ್ರಪತಿಗಳ ಅಧಿಕಾರ ಯಥಾಸ್ಥಿತಿಯಲ್ಲಿರಲಿದೆ. 370 ನೇ ವಿಧಿಯನ್ನು ತೆಗೆದುಹಾಕುವ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ಏಕೀಕರಣಕ್ಕಾಗಿ ಎಂದು ಸಿಜೆಐ ಹೇಳಿದರು