ಬೆಳಗಾವಿ, ಡಿ 15 (DaijiworldNews/AK): ಇತ್ತೀಚೆಗೆ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ನಡೆಸಿದ ಸಂತ್ರಸ್ತೆಗೆ ರಾಜ್ಯ ಸರಕಾರದ ವತಿಯಿಂದ5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ ಕೂಡ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದರು.
ಡಿ. 11 ರಂದು ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಹುಡುಗಿಯೊಂದಿಗೆ ಮಗ ಓಡಿಹೋದ ಎಂದು ಮಹಿಳೆಯ ಮೇಲೆ ಹಲ್ಲೆ ನಡೆಸಿ ವಿವಸ್ತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ .ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.