ಶ್ರೀನಗರ, ಡಿ 17 (DaijiworldNews/AA): ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಕಳೆದ ವಾರ ಪೊಲೀಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು 'ಹೈಬ್ರಿಡ್' ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್.ಆರ್.ಸ್ವೈನ್ ಇಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಡಿ. 9 ರಂದು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕಾನ್ಸ್ ಸ್ಟೇಬಲ್ ಮೊಹಮ್ಮದ್ ಹಫೀಜ್ ಚಾಕ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ದಾಳಿಯ ಸಂಚನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಅರ್ಜುಮಂಡ್ ಅಲಿಯಾಸ್ ಹಮ್ಜಾ ಬುರ್ಹಾನ್ ರೂಪಿಸಿದ್ದು, ಈತ ಸ್ಥಳೀಯ ಮಾಸ್ಟ್ರರ್ ಮೈಂಡ್ ಡ್ಯಾನಿಶ್ ಅಹ್ಮದ್ ಮುಲ್ಲಾ ಅವರೊಂದಿಗೆವರೊಂದಿಗೆ ಸಂಪರ್ಕ ಹೊಂದಿದ್ದ ಎಂದು ತಿಳಿಸಿದರು.
ಇನ್ನು ಪೊಲೀಸ್ ಮೇಲೆ ದಾಳಿ ನಡೆಸಿದ ಹೈಬ್ರಿಡ್ ಭಯೋತ್ಪಾದಕರು ದಾಳಿ ಬಳಿಕ ತಮ್ಮ ದಿನನಿತ್ಯದ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.