ಮುಂಬೈ, ಡಿ 17 (DaijiworldNews/PC): ಮಸೀದಿ ಪಕ್ಕದಲ್ಲಿ ನಿಂತುಕೊಂಡಿದ್ದ ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇಂತಹ ಕೃತ್ಯವು ಆರೋಪಿಯು ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶವನ್ನು ತೋರಿಸುತ್ತದೆ ಎಂದು ಕೋರ್ಟ್ ಗಮನಿಸಿ ಈ ಹಿನ್ನೆಲೆಯಲ್ಲಿ 2016ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
2016ರ ಮೇ 24ರಂದು ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ, ಜೊತೆಗೆ ಆಕೆ ತುಂಬಾ ʻಹಾಟ್ʼ ಆಗಿ ಕಾಣ್ತಿದ್ದಾಳೆ ಎಂದು ಕರೆದಿದ್ದ. ಅಷ್ಟೇ ಅಲ್ಲದೇ ಆಕೆ ಕೆನ್ನೆಗೆ ಮುತ್ತಿಡಲು ಬಯಸಿದ್ದ, ಆಕೆಯನ್ನು ತನ್ನೊಂದಿಗೆ ಕೆರೆದುಕೊಂಡು ಹೋಗಬೇಕು ಅನ್ನಿಸುತ್ತದೆ ಎಂಬ ಮಾತುಗಳನ್ನು ಹೇಳಿರುವುದು ಸಾಬೀತಾಗಿದೆ.
ವಿಶೇಷ ಪೋಕ್ಸೊ IPC ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.