ಮಡಿಕೇರಿ, ಡಿ 18 (DaijiworldNews/AK): ಕೇಂದ್ರದಲ್ಲಿ ಬಿಜೆಪಿ ಇರುವುದರಿಂದ ಸಂಸದ ಪ್ರತಾಪ್ ಸಿಂಹ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಂಸತ್ನಲ್ಲಿ ಸ್ಮೋಕ್ ಬಾಂಬ್ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡುವ ತಂತ್ರ ಎಂಬ ಲೇಹರ್ ಸಿಂಗ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಲೇಹರ್ ಸಿಂಗ್ ಅವರು ಸ್ವಲ್ಪ ಜವಬ್ದಾರಿಯುತವಾಗಿ ಮಾತನಾಡಬೇಕು. ರಾಜ್ಯಸಭೆಗೆ ಕಳುಹಿಸಿರುವುದು ಹುಚ್ಚು ಹುಚ್ಚಾಗಿ ಮಾಡನಾಡಲು ಅಲ್ಲ. ಪ್ರತಾಪ್ ಸಿಂಹ ಜಾಗದಲ್ಲಿ ಕಾಂಗ್ರೆಸ್ ಸಂಸದ ಇದ್ದಿದ್ದರೆ ಉಚ್ಛಾಟಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.
ಸಂಸತ್ನಲ್ಲಿ ಸ್ಮೋಕ್ ಬಾಂಬ್ನ ಬಗ್ಗೆ ತನಿಖೆಗೆ ಒಳಪಡಿಸುತ್ತಿದ್ದರು. ದೇಶಾದ್ಯಂತ ಪ್ರತಿಭಟನೆ ಮಾಡಿಬಿಡುತ್ತಿದ್ದರು. ಆದರೆ ಇದೀಗ ಬಿಜೆಪಿಯವರೇ ಇರುವುದರಿಂದ ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಪ್ರತಾಪ್ ಸಿಂಹ ಅವರ ರಕ್ಷಣೆ ಮಾಡಲು ಬಿಜೆಪಿ ನಿಂತುಕೊಂಡಿದೆ.
ಪ್ರಧಾನಿಯೇ ಗಂಭೀರ ಎಂದ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳತ್ತಿಲ್ಲಈ ವಿಚಾರದ ಬಗ್ಗೆ ಹೋರಾಟ ಮಾಡಿದ್ರೆ ಕಾಂಗ್ರೆಸ್ ಎಂಪಿಗಳನ್ನು ಸಸ್ಪೆಂಡ್ ಮಾಡ್ತಾರೆ ಎಂದು ಟೀಕಿಸಿದರು.