ಬೆಂಗಳೂರು, ಡಿ 18 (DaijiworldNews/AK): ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸಿದ ಹೊಸ ಸರ್ಕಾರದ ಮೇಲೆ ಉತ್ತರ ಕರ್ನಾಟಕದ ಜನ ನಿರೀಕ್ಷೆ ಮಾಡಿದ್ದರು ಆದರೆ, ಯಾವುದೇ ವಿಶೇಷ ಅಭಿವೃದ್ಧಿ ಪರ ನಿರ್ಣಯ ಘೋಷಿಸದೇ ಜನರ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ಪುಟಗಳ ಪತ್ರ ಬರೆದಿರುವ ಬೊಮ್ಮಾಯಿ, , ಇಡೀ ಕರ್ನಾಟಕದಲ್ಲಿ ಯಾವುದೇ ಮೂಲಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವ ಕಟು ಸತ್ಯದ ಅನುಭವ ಜನರಿಗೆ ಆಗಿದೆ ಎಂದು ಹೇಳಿದ್ದಾರೆ.
ಕೃಷ್ಣಾ ಮೇಲ್ದಂಡೆ ಹಂತ 3 ರ 130 ಟಿಎಂಸಿ ನೀರು ಬಳಕೆ ಮಾಡಲು ನಮ್ಮ ಸರ್ಕಾರ ಪ್ರಾರಂಭ ಮಾಡಿರುವ ಪುನರ್ವಸತಿ ಮತ್ತು ಪುನರ್ನಿರ್ಮಾಣನಕ್ಕೆ ಈ ವರ್ಷ ಬಿಡಿಗಾಸು ಬಿಡುಗಡೆ ಮಾಡದಿರುವುದು ಉತ್ತರ ಕರ್ನಾಟಕದ ಬಗ್ಗೆ ಸರ್ಕಾರಕ್ಕೆ ಇರುವ ಅಸಡ್ಡೆ ಭಾವನೆ ಎದ್ದು ಕಾಣುತ್ತದೆ . ಹೀಗೆ ಹಲವು ವಿಷಯಗಳ ಬಗ್ಗೆ ಎಂದು ವಾಗ್ದಾಳಿ ನಡೆಸಿದ್ದಾರೆ.