ಬೆಂಗಳೂರು,ಡಿ 20 (DaijiworldNews/AK): ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಆರ್ಭಟ ಹೆಚ್ಚಾದ ಹಿನ್ನಲೆ ಕೆಎಸ್ಆರ್ಟಿಸಿ ಮತ್ತೆ ಎಚ್ಚೆತ್ತುಕೊಂಡಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ.
ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂಕಡ್ಡಾಯ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.