ಬೆಂಗಳೂರು, ಡಿ 20 (DaijiworldNews/AA): ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾ ಮಾಡಿದೆ.
ವಕೀಲ ದೇವರಾಜೇಗೌಡ ಎಂಬುವವರು ಸೂರಜ್ ರೇವಣ್ಣ ಅವರನ್ನು ಎಂಎಲ್ ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು ವಜಾ ಮಾಡಿದೆ.
ವಕೀಲ ದೇವರಾಜೇಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಸೂರಜ್ ರೇವಣ್ಣ ಅವರನ್ನು ಎಂಎಲ್ ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಅರ್ಜಿ ವಜಾಗೊಳಿಸಿರುವುದರಿಂದ ಸೂರಜ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.