ನವದೆಹಲಿ, ಡಿ 22 (DaijiworldNews/MS): ಐಎನ್ಡಿಐಎ ಮೈತ್ರಿಕೂಟದಲ್ಲಿ ನಿತೀಶ್ ಕುಮಾರ್ ಅವರನ್ನು ಕಡೆಗಣಿಸಿ, ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಜೆಡಿಯು ಮುಖ್ಯಸ್ಥನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರೆ ಮಾಡಿ ಮಾತಾಡಿದ್ದು ಈ ವೇಳೆ ಬುಧವಾರ ನಡೆದ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ಉಂಟಾದ ಗೊಂದಲ ಕುರಿತು ರಾಹುಲ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಮೈತ್ರಿಕೂಟದಲ್ಲಿ ಪ್ರಸ್ತಾಪಿಸಿದ್ದು, ಜೆಡಿಯು ಮುಖ್ಯಸ್ಥನಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಕಾರಣದಿಂದಲೇ ನಿತೀಶ್, ಸಭೆ ನಂತರದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಲಾಗಿದೆ.