ಚಿಕ್ಕಮಗಳೂರು,ಏ19(Daijiworld News/AZM):ಠಾಣೆಯಲ್ಲೇ ಕರ್ತವ್ಯನಿರತ ಕಾನ್ ಸ್ಟೆಬಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯೋಗೇಶ್( 31) ಮೃತ ಕಾನ್ ಸ್ಟೆಬಲ್. ಇವರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಗುರುವಾರ ರಾತ್ರಿ ಎಂದಿನಂತೆ ಯೋಗೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹಾಗೂ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ. ಹಾಗೂ ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸುದ್ದಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ವರದಿ ಬಂದ ನಂತರವಷ್ಟೇ ಸಾವು ಹೇಗೆ ಸಂಭವಿಸಿದೆ ಎಂಬುದು ಗೊತ್ತಾಗಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪುರ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.