ಶಿವಮೊಗ್ಗ, ಡಿ24 (daijiworldNews/AK): ಸಿಎಂ ಯಾವಾಗ ಸಭೆ ನಿಗದಿ ಮಾಡುತ್ತಾರೋ ಗೊತ್ತಿಲ್ಲ. ಇನ್ನು ಚರ್ಚೆಯ ಹಂತದಲ್ಲಿದೆ. ಕಾನೂನು ತಜ್ಞರ ಜೊತೆ ಚರ್ಚೆ ನಡೆಸಬೇಕು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋ ಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಕಾಂಗ್ರೆಸ್ ಬೇಕು ಅಂದಿತ್ತು. ಬಿಜೆಪಿಯವರು ಬೇಡ ಎಂದಿದ್ದರು. ಸರ್ಕಾರ ಬಂದಾಗ ಯಾರೋ ಕೇಳಿದ್ದಾರೆ. ಸರ್ಕಾರವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸಮವಸ್ತ್ರ ವಿಚಾರಕ್ಕೆ ಯಾವುದೇ ಗೊಂದಲ ಇಲ್ಲ. ಮೊದಲಿನಂತೆ ನಡೆಯುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿ. 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ. ಜ.12 ರಂದು ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿಗೆ ಚಾಲನೆ ನೀಡುತ್ತೇವೆ. ಸ್ವಾಮಿ ವಿವೇಕಾನಂದ ಜಯಂತಿಯ ದಿನ ಚಾಲನೆನೀಡುತ್ತೇವೆ. ಆ ದಿನವೇ ಫಲಾನುಭವಿಗಳ ಖಾತೆಗೆ ಹಣ ಹೋಗಲಿದೆ ಎಂದರು.