ಗುನಾ , ಡಿ 28 (DaijiworldNews/MS): ಮಧ್ಯ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 13 ಮಂದಿ ಸಜೀವ ದಹನವಾಗಿದ್ದು, 18 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ.
ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ಹೊತ್ತಿ ಉರಿದಿದೆ. ಬಸ್ಸಿ ನಲ್ಲಿದ್ದ 1೩ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ
ಗಾಯಾಳುಗಳನ್ನು ಗುಣ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.