ದಾವಣಗೆರೆ, ಎ20(Daijiworld News/SS): ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರ ಮೇ 23ರ ನಂತರ ಪತನವಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಮ್ಮಿಶ್ರ ಸರಕಾರ ರಚನೆ ಆದಾಗಿನಿಂದಲೂ ಹೇಳಿಕೊಂಡು ಬರುತ್ತಲೇ ಇದ್ದಾರೆ. ಯಡಿಯೂರಪ್ಪಗೆ ಮಾನ-ಮರ್ಯಾದೆ ಇಲ್ಲ. ಕೇವಲ 2 ದಿನ ಸಿಎಂ ಆಗಿ, ಆಮೇಲೆ ಬಹುಮತ ಸಾಬೀತುಪಡಿಸಲು ಆಗದೇ ಫೇಲ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರ ಮೇ 23ರ ನಂತರ ಪತನವಾಗುತ್ತದೆ. ಆ ದೃಷ್ಟಿಯಿಂದಲೇ ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಿರಬಹುದು. ಸಮ್ಮಿಶ್ರ ಸರ್ಕಾರ . ಆದರೆ ಮೇ 23ಕ್ಕೆ ಯಡಿಯೂರಪ್ಪ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ನಾನೇನು ನಾಳೆನೇ ಸಿಎಂ ಆಗುತ್ತೀನಿ ಎಂದು ಹೇಳಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೇನೆ. ನಾನೇನು ರಾಜಕೀಯ ಸನ್ಯಾಸಿ ಅಲ್ಲ. ಸಿಎಂ ಆದಮೇಲೆ 7 ರಿಂದ 10 ಕೆ ಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.