ಬೆಂಗಳೂರು, ಜ 03 (DaijiworldNews/HR): ಕರಸೇವಕ ಶ್ರೀಕಾಂತ ಪೂಜಾರಿಯವರನ್ನು ಬಿಡುಗಡೆ ಮಾಡದಿದ್ದಲ್ಲಿ ಇದೇ 9ರಂದು ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ತಿಳಿಸಿದ್ದಾರೆ.
ವಿಧಾನಸಭೆಯ ಬಿಜೆಪಿ ಉಪ ನಾಯಕ ಅರವಿಂದ ಬೆಲ್ಲದ್ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಲಿದ್ದು, ಸಾವಿರಾರು ಜನರು ಠಾಣೆಗೆ ಮುತ್ತಿಗೆ ಹಾಕಲಿದ್ದಾರೆ. ಕೂಡಲೇ ಶ್ರೀಕಾಂತ ಪೂಜಾರಿಯವರನ್ನು ಬಿಡುಗಡೆ ಮಾಡಲು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜಕೀಯ ಪ್ರೇರಿತವಾಗಿ ಕರಸೇವಕರನ್ನು ಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.