ಹುಬ್ಬಳ್ಳಿ, ಜ 06 (DaijiworldNews/AK): 30 ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಕರಸೇವಕ ಶ್ರೀಕಾಂತ್ ಪೂಜಾರಿ
ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಶುಕ್ರವಾರವಾದಂದು ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಿಡುಗಡೆಗೊಂಡಿದ್ದಾರೆ.ಉಪಕಾರಾಗೃಹದಿಂದ ಹೊರ ಬರುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಶ್ರೀ ರಾಮ ಕೀ ಜೈ ಎಂದು ಘೋಷಣೆ ಕೂಗಿ ಶ್ರೀಕಾಂತ್ ಪೂಜಾರಿಯನ್ನು ಬರಮಾಡಿಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಶ್ರೀಕಾಂತ್ , ಮೂರು ದಶಕಗಳ ಹಿಂದಿನ ಪ್ರಕರವಣನ್ನು ಈ ವೇಳೆ ನನ್ನನ್ನು ಬಂಧಿಸಿದ್ದಾರೆ. ನನಗೆ ವಾರಂಟ್, ಸಮನ್ಸ್ ನೀಡದೆ ನನ್ನನ್ನು ಪೊಲೀಸರು ಬಂಧಿಸಿದ್ದಾರೆ.
ನಾನು ಅಯೋಧ್ಯೆಯ ಶ್ರೀ ರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ಎಲ್ಲಾ ಪ್ರಕರಣಗಳು ಖುಲಾಸೆಯಾಗಿವೆ. ಆದರೂ ನನ್ನನ್ನು ಬಂಧಿಸಿದ್ದಾರೆ. ನನ್ನ ಬಿಡುಗಡೆಗೆ ಸಹಕರಿಸಿದ ಎಲ್ಲಾ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಅವರು, ಬಂಧನ ಮಾಡುವ ದಿನ ಮನೆಗೆ ಬಂದ ಪೊಲೀಸರು ಮಾರುಕಟ್ಟೆಗೆ ಕರೆದುಕೊಂಡು ಹೋಗುವುದಾಗಿ ಜೈಲಿಗೆ ಕಳುಹಿಸಿದರು. ಸರಕಾರ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದೆಯೋ ಅನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.