ಬೆಂಗಳೂರು, ಜ 08 (DaijiworldNews/HR): ಹುಟ್ಟು ಹಬ್ಬದ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶಗೊಂಡು ಮೂರು ಮಂದಿ ಯಶ್ ಅಭಿಮಾನಿಗಳು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದರು.
ಫ್ಲೆಕ್ಸ್ ಹಾಕುವಾಗ ಮೃತಪಟ್ಟಿರುವ ಮೂವರು ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಸಂಜೆಯೇ ನಟ ಯಶ್ ಗದಗ ಜಿಲ್ಲೆಗೆ ತೆರಳಲಿದ್ದಾರೆ ಎನ್ನಲಾಗಿದೆ.
ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ.