ಕಲಬುರಗಿ, ಜ 09 (DaijiworldNews/HR): ಕರ್ನಾಟಕದಲ್ಲಿ ಭುಗಿಲೆದ್ದಿರುವ ಮೂರು ಡಿಸಿಎಂಗಳ ಕುರಿತಾದ ಬೇಡಿಕೆಗಳ ಚರ್ಚೆ ಹೈಕಮಾಂಡ್ ಅಂಗಳಕ್ಕೆ ಬಂದಿಲ್ಲ. ಇದೆಲ್ಲ ಕೇವಲ ಊಹಾಪೋಹ ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂ ಚರ್ಚೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ರಾಜ್ಯದಲ್ಲಿ ಎದ್ದಿರುವ ಮೂರು ಡಿಸಿಎಂ ಚರ್ಚೆ ಕೇವಲ ಊಹಾಪೋಹ ಅಷ್ಟೇ. ಚುನಾವಣೆಯ ಸಮಯದಲ್ಲಿ ಈ ವಿಚಾರವನ್ನು ತರುವುದು ಸರಿಯಲ್ಲ ಎಂದರು.
ಇನ್ನು ಚುನಾವಣೆಯ ಸಮಯದಲ್ಲಿ ಸರ್ಕಾರ ಸರಿಯಾಗಿ ನಡೆಸಿ ನಾವು ಕೊಟ್ಟಿರುವ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಮುಖ್ಯ ಗುರಿಯಾಗಿರಬೇಕು ಎಂದು ಹೇಳಿದ್ದಾರೆ.