ಬೆಂಗಳೂರು, ಜ 13(DaijiworldNews/SK): ರಾಮಮಂದಿರದ ವಿಚಾರದ ಬಗ್ಗೆ ಎಡಬಿಡಂಗಿ ಕಾಂಗ್ರೆಸ್ ನಾಯಕರ ಪಾಡು ಅತ್ತ ದರಿ ಇತ್ತ ಪುಲಿ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗುತ್ತೇವೆ ಎಂಬ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡಿದರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಕುರ್ಚಿಗೆ ಕುತ್ತು ಬರುವ ಭಯ ಕಾಂಗ್ರೆಸ್ ನಾಯಕರಲ್ಲಿದೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ. ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯವಿದೆ ಎಂದು ಸಚಿವರು ವಾಗ್ದಾಳಿ ನಡೆಸಿದರು.