ನವದೆಹಲಿ, ಜ 13 (DaijiworldNews/HR): ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಸಲಾಗಿದ್ದು, ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.