ಹುಬ್ಬಳ್ಳಿ, ಜ 13(DaijiworldNews/AK): ರಾಜ್ಯದಲ್ಲಿ ಪದೇ ಪದೇ ನೈತಿಕ ಪೋಲಿಸ್ ಗಿರಿ ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದರು.
ಈ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೋಲಿಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೋಲಿಸ್ ಗಿರಿ ಮಾಡಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇಂತಹ ಕೃತ್ಯ ಮಾಡಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವಿಗೆ ನಾನು ಬದ್ದ, ನಾನು ರಾಮನ ಭಕ್ತೆ, ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಹೇಳಿದರು.