ಮುಂಬೈ, ಜ 14(DaijiworldNews/SK): ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ ಅವರು ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಶಿವಸೇನೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇದರ ಬೆನ್ನಲ್ಲೆ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವೀಯ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವೀಯ ಅವರು, 55 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಮಾಜಿ ಸಂಸದ ಮಿಲಿಂದ್ ಅವರು ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಜೊತೆ ಮುನಿಸಿಕೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಇನ್ನು ಇದರ ಬೆನ್ನಲ್ಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಣಿಪುರದಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಕೈಗೊಳ್ಳಲಿದ್ದಾರೆ ಇದು ಎಷ್ಟು ಸರಿ? ಮೊದಲು ಪಕ್ಷದ ಸಮಸ್ಯೆಯನ್ನು ಬಗೆಹರಿಸಿಕೊಂಡು ಪಕ್ಷ ತೊರೆದ ನಾಯಕರಿಗೆ ನ್ಯಾಯ ಒದಗಿಸಿ, ಬಳಿಕ ನ್ಯಾಯ ಯಾತ್ರೆ ಮುಂದುವರಿಸಲಿ ಎಂದು ವ್ಯಂಗ್ಯವಾಡಿದ್ದಾರೆ.