ಹುಬ್ಬಳ್ಳಿ, ಜ 15(DaijiworldNews/AK): ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದಿಂದ ಅಧಿಕಾರಕ್ಕೆ ಬರಲೆಂದು ಬಿಜೆಪಿ ಧರ್ಮ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು. ಕಾಂ ಗ್ರೆಸ್ನವರು ದೇವಾಲಯ ಹಾಗೂ ಹಿಂದೂ ವಿರೋಧಿಗಳೆಂದು ಬಿಂಬಿಸಲು ಮನ ಬಂದಂತೆ ಮಾತನಾಡುತ್ತಿದ್ದಾರೆ' ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಯೋ ಧ್ಯೆಗೆ ಹೋಗದಿರುವುದಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆ ಹೇಳಬಾರದೆನ್ನುವ ಯಾವುದೇ ನಿಯಮವಿಲ್ಲ.
ಚುನಾವಣೆ ಮುಗಿಯುವವರೆಗೆ ಮಾತ್ರ ಬಿಜೆಪಿಯವರಿಗೆ ರಾಮಮಂದಿರ ವಿಷಯ ನೆನಪಲ್ಲಿರುತ್ತದೆ. ಈಗಾಗಲೇ ಶಂಕರಾಚಾರ್ಯರು ಮಂದಿರ
ಉದ್ಘಾಟನೆಗೆ ಹೋಗುವುದಿಲ್ಲ ಎಂದು ಬಹಿಷ್ಕರಿಸಿದ್ದಾರೆ. ಹೀಗಿರುವಾಗ ಅವರನ್ನು ಮೀರಿ ಬಿಜೆಪಿಯವರು ಇದ್ದಾರೆಯೇ ಎಂದು ತಿರುಗೇಟು ನೀಡಿದರು.