ನವದೆಹಲಿ, ಜ 16 (DaijiworldNews/HR): ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಶಾಹಿ ಈದ್ಗಾ ಆವರಣದ ಸಮೀಕ್ಷೆ ನಡೆಸಲು ನ್ಯಾಯಲಯದ ನಿಗಾದಲ್ಲಿರುವ ಅಡ್ವೋಕೇಟ್ ಕಮಿಷನರ್ರನ್ನು ನೇಮಕಾ ಮಾಡಬೇಕು ಎಂದು ಅಲಹಾಬಾದ್ ಹೈಕೋರ್ಟ್ಗೆ ಮನವಿಯನ್ನು ಮಾಡಲಾಗಿತ್ತು.
ಇನ್ನು ಮನವಿಯ ಮೇರೆಗೆ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ನೇಮಿಸಲು ಅಲಹಾಬಾದ್ ಹೈಕೋರ್ಟ್ ಆದೇಶವನ್ನು ನೀಡಿತ್ತು.
ಅಲಹಾಬಾದ್ ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮುಸ್ಲಿಂ ಸಂಘಟನೆಗಳು ಅರ್ಜಿಯನ್ನು ಸಲ್ಲಿಸಿತ್ತು. ಇದೀಗ ಹೈಕೋರ್ಟ್ನ ಈ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.