ನವದೆಹಲಿ, ಜ 16(DaijiworldNews/PC): ಇಡೀ ದೇಶದ ಗಮನ ಸೆಳೆದಿದ್ದ ಜ್ಞಾನವಾಪಿ ಮಸೀದಿ ಕೇಸ್ಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ʼವಜುಖಾನಾʼ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಜ.16 ರಂದು ಮಹತ್ವದ ತೀರ್ಪು ನೀಡಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ವಜುಖಾನಾದ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಜ್ಞಾನವಾಪಿ ಮಸೀದಿ ಕಟ್ಟಡದಲ್ಲಿ ಶಿವಲಿಂಗವಿದೆ ಎಂದು ಹಿಂದೂಗಳು ಹೇಳಿಕೊಂಡಿದ್ದರು. ಜ್ಞಾನವಾಪಿಯ ಮುಚ್ಚಿದ ಪ್ರದೇಶವನ್ನು ತೆರೆಯಬೇಕು ಮತ್ತು ತಕ್ಷಣ ಸ್ವಚ್ಛಗೊಳಿಸಬೇಕು ಎಂದು ಹಿಂದೂಗಳು ಮನವಿ ಸಲ್ಲಿಸಿದ್ದರು.
ಇದೀಗ ಹಿಂದೂಗಳ ಬೇಡಿಕೆಗೆ ತಕ್ಕಂತೆ ಸುಪ್ರೀಂ ಕೋರ್ಟ್ ಸ್ವಚ್ಛತೆಗೆ ಆದೇಶ ನೀಡಿದೆ.
16 ಮೇ 2022 ರಂದು ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಕೊಳವೊಂದು ಪತ್ತೆಯಾಗಿತ್ತು. ಇದನ್ನು ಹಿಂದೂಗಳು ‘ಶಿವಲಿಂಗ’ಎಂದು ವಾದಿಸಿದರೆ, ಮುಸ್ಲಿಮರು ‘ಕಾರಂಜಿ’ಎಂದು ಪ್ರತಿಪಾದಿಸಿದ್ದರು ಈಗ ಸುಪ್ರೀಂ ಕೋರ್ಟ್ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಲು ಆದೇಶ ನೀಡಿದೆ.