ಕೋಲ್ಕತ್ತಾ, ಜ 16(DaijiworldNews/AK): ಜನವರಿ 22 ರಂದು ಎಲ್ಲಾ ಧರ್ಮಗಳ ಜನರೊಂದಿಗೆ 'ಸಾಮರಸ್ಯ ರ್ಯಾಲಿ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಘೋಷಿಸಿದ್ದಾರೆ.
ಅಂದು ಕೊಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್ನಿಂದ 'ಸಾಮರಸ್ಯ ರ್ಯಾಲಿ ಆರಂಭಿಸಲಿದ್ದಾರೆ
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸುತ್ತೇ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.
ಟಿಎಂಸಿ ಆಯೋಜಿಸಲಿರುವ ಈ ರ್ಯಾಲಿ, ಪಾರ್ಕ್ ಸರ್ಕಸ್ ಮೈದಾನದಲ್ಲಿ ಮುಕ್ತಾಯಗೊಳ್ಳುವ ಮುನ್ನ ಮಸೀದಿಗಳು, ಚರ್ಚ್ಗಳು ಮತ್ತು ಗುರುದ್ವಾರಗಳು ಸೇರಿದಂತೆ ವಿವಿಧ ಧರ್ಮಗಳ ಪೂಜಾ ಸ್ಥಳಗಳಿಗೆ ಭೇಟಿ ನೀಡಲಿದೆ ಎಂದು ಹೇಳಿದ್ದಾರೆ.