ಮಡಿಕೇರಿ, ಜ 16(DaijiworldNews/PC): ಎಲ್ಲರಿಗೂ ಗುಡ್ ಬೈ ಎಂದು ಬರೆದಿಟ್ಟು ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರಿನ ಸಂದೇಶ್ (35) ಎಂದು ಗುರುತಿಸಲಾಗಿದೆ.
ಕಳೆದ 2 ದಿನಗಳಿಂದ ಹೊಟೆಲ್ನಲ್ಲಿ ತಂಗಿದ್ದು ಜ.16 ರಂದು ರೂಮ್ನ ಕಿಟಕಿಯ ಸರಳಿಗೆ ಬಟ್ಟೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.
ಕೋಣೆಯಲ್ಲಿ ಡೆತ್ನೋಟ್ ಕೂಡಾ ಪತ್ತೆಯಾಗಿದ್ದು ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ, ಎಲ್ಲರಿಗೂ ಗುಡ್ ಬೈ, ಯಾರೂ ಬೇಸರ ಮಾಡಬಾರದು ಎಂದು ಬರೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಮೂಲಗಳು ನೀಡಿವೆ.
ಈ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.