ಆನೇಕಲ್, ಜ 19 (DaijiworldNews/HR): ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.