ಬೆಂಗಳೂರು, ಜ 21 (DaijiworldNews/HR): ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರದಿಂದ ರಜೆ ಕೊಡುವ ವಿಚಾರದಲ್ಲಿ ನಮಗೆ ಯಾರೂ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಜೆ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದರು.
ಇನ್ನು ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳ್ತಿದ್ದೇವೆ ಎಂದು ಹೇಳಿದ್ದಾರೆ.