ಬೆಂಗಳೂರು, ಜ 21 (DaijiworldNews/HR): ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.
ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊದಲ ಮೈತ್ರಿ ಸಭೆ ನಡೆಯಿತು.
ಇನ್ನು ಈ ಸಭೆಯಲ್ಲಿ ಉಪ ಚುನಾವಣೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ಭೇಟಿ ನಂತರ ಅಂತಿಮ ಘೋಷಣೆಯಾಗಲಿದೆ.