ಬೆಂಗಳೂರು,ಜ 23(DaijiworldNews/RA):ನಿಗಮ ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ನ ನಿರ್ಧಾರಕ್ಕೆ ಭಾರೀ ಅಸಮಾಧಾನ ವ್ಯಕ್ತವಾಗಿದೆ.
ಹೈಕಮಾಂಡ್ ನಾಯಕರು ಕಳುಹಿಸಿದ್ದ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.ಇತ್ತ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಳ್ಳುವ ಮುನ್ನ ರಾಜ್ಯ ನಾಯಕರನ್ನು ಸಂಪರ್ಕಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆದರೂ ಇನ್ನೂ ಮಂಡಳಿ, ನಿಗಮಗಳಿಗೆ ನೇಮಕಾತಿ ನಡೆದಿಲ್ಲ. ಶೀಘ್ರವೇ ನೇಮಕಾತಿ ಮಾಡುವಂತೆ ಶಾಸಕರು ಮತ್ತು ಪಕ್ಷದ ಕಾರ್ಯಕರ್ತ ರಾಜ್ಯ ನಾಯಕರು ಒತ್ತಡ ಹೇರುತ್ತಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆದರೂ ಇನ್ನೂ ಮಂಡಳಿ, ನಿಗಮಗಳಿಗೆ ನೇಮಕಾತಿ ನಡೆದಿಲ್ಲ.ಶೀಘ್ರವೇ ನೇಮಕಾತಿ ಮಾಡುವಂತೆ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರಿಂದ ರಾಜ್ಯ ನಾಯಕರು ಒತ್ತಡ ಹೇರುತ್ತಿದ್ದಾರೆ.ಬಹಳ ವಿಳಂಬದ ನಂತರ ಶನಿವಾರ ಪಕ್ಷದ ಹೈಕಮಾಂಡ್ ರಾಜ್ಯ ನಾಯಕರಿಗೆ ಪಟ್ಟಿ ಕಳುಹಿಸಿತ್ತು.
ಆದರೆ, ರಾಜ್ಯ ನಾಯಕರ ಸಲಹೆ ಪಡೆಯದೆ ಕೊನೆಯ ಕ್ಷಣದಲ್ಲಿ ಪಟ್ಟಿಗೆ ಕೆಲವು ಹೆಸರುಗಳನ್ನು ಸೇರ್ಪಡೆಗೊಳಿಸಿರುವುದು ಸಿಎಂ ಹಾಗೂ ಉಪಮುಖ್ಯಮಂತ್ರಿಗಳ ಅಸಮಾಧಾನಕ್ಕೆ ಕಾರಣವಾಗಿದೆ.ಇದರಿಂದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಬೇಕಾಯಿತು. ಈ ಸಭೆಯಲ್ಲಿ ರಾಜ್ಯ ನಾಯಕರು ಕಳುಹಿಸಿದ ಹೆಸರುಗಳನ್ನು ಅನುಮೋದಿಸುವಂತೆ ಸಿಎಂ ಮತ್ತು ಡಿಸಿಎಂ ಪಕ್ಷವನ್ನು ಮನವಿ ಮಾಡಿದ್ದಾರೆ.