ಕಲಬುರಗಿ, ಫೆ 03 (DaijiworldNews/PC): ರಾಜ್ಯದಲ್ಲೇ ಹಲವು ಕಡೆಗಳಲ್ಲಿ ನಕಲಿ ವೈದ್ಯರ ಹಾವಳಿಗಳು ಹೆಚ್ಚಾಗಿದ್ದು ಕಲಬುರಗಿ ಜಿಲ್ಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದಾರೆ.
KPME ಅನುಮತಿ ಪಡೆಯದೆ ಜನರಿಗೆ ಚಿಕಿತ್ಸೆಯನ್ನು ನೀಡುತ್ತಿರುವ ಈ ಬಗ್ಗೆ ಮಾಹಿತಿ ಪಡೆದ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಲಬುರಗಿ ಜಿಲ್ಲೆಯಲ್ಲಿ 109 ನಕಲಿ ವೈದ್ಯರು ಪತ್ತೆಯಾಗಿದ್ಧಾರೆ. 43 ಕ್ಲಿನಿಕ್ಗಳನ್ನು ಬಂದ್ ಮಾಡಿಸಲಾಗಿದೆ.
KPME ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಕ್ಲಿನಿಕ್ಗಳಿಗೆ ನೋಟಿಸ್ ಜಾರಿ ಮಾಡಿದ್ದು ಆದಷ್ಟು ಬೇಗ ಅನುಮತಿ ಪಡೆಯದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.