ಬೆಂಗಳೂರು, ಫೆ 3(DaijiworldNews/SK): ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕರು ದೆಹಲಿ ಚಲೋಗೆ ಮುಂದಾಗಿದ್ದಾರೆ. ಅದಕ್ಕೂ ಮೊದಲು ಕಳೆದ 20 ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2004ರಿಂದ 2014ರವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ. ಯುಪಿಎ ಸರ್ಕಾರದಲ್ಲಿ ಎಷ್ಟು ಹಣ ಬಂದಿದೆ ಎಂಬುದನ್ನು ರಾಜ್ಯಸರ್ಕಾರ ಶ್ವೇತಪತ್ರ ಹೊರಡಿಸಿ. ಈಗ ಮೋದಿ ಅವರ ಅವಧಿಯಲ್ಲಿ 2014ರಿಂದ 2024 ರವರೆಗೆ ಎಷ್ಟು ಹಣ ಬಂದಿದೆ ಎಂಬುದನ್ನು ಶ್ವೇತಪತ್ರ ಹೊರಡಿಸಿ ಆಗ ತಿಳಿಯುತ್ತದೆ ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂದು.
ದೇಶದ್ರೋಹದ ಹೇಳಿಕೆಯನ್ನು ಡ್ಯಾಮೇಜ್ ಕಂಟ್ರೋಲ್ ಮಾಡಲು ಈ ರೀತಿ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಸತ್ನಲ್ಲಿ ಸೈಲೆಂಟ್, ಹೊರಗಡೆ ವೈಲೆಂಟ್. ವಾಟ್ ಈಸ್ ಯುವರ್ ಪ್ರಾಬ್ಲಮ್? ಒಂಬತ್ತು ವರ್ಷಗಳ ಕಾಲ ಮೌನವಾಗಿದ್ದು ಈಗ ಮಾತನಾಡುತ್ತಿದ್ದೀರಾ ನಾಚಿಕೆ ಆಗಲ್ವಾ ಎಂದು ಟೀಕಿಸಿದರು.