ಬೆಳಗಾವಿ, ಫೆ 05 (DaijiworldNews/PC): ಬೆಳಗಾವಿಯ ಜನರು ನನ್ನ ಮಗ ಮೃಣಾಲ್ ಹೆಬ್ಬಾಳ್ಕರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂದು ಬಯಸಿದ್ದು, ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಪಾಲಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮಗ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕು ಎನ್ನುವ ಬಯಕೆ ಜನರದ್ದು. ಆತನ ಹೆಸರು ಹೈಕಮಾಂಡ್ಗೆ ಹೋಗಿರುವ ವಿಚಾರ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮೃಣಾಲ್ ಅಥವಾ ಬೇರೆ ಯಾರಿಗೆ ನೀಡಿದರೂ ಕೆಲಸ ಮಾಡುತ್ತೇನೆ. ಈಗಾಗಲೇ ಟಿಕೆಟ್ಗೆ ಸಂಬಂಧಿಸಿ ಸರ್ವೇ ನಡೆಸಲಾಗುತ್ತಿದೆ ಎಂದರು.