ತುಮಕೂರು, ಫೆ 5(DaijiworldNews/SK): ಈ ಬಾರಿಯ ಲೋಕಸಭೆ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ನನ್ನ ಸ್ಪರ್ಧೆ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹಿರಿಯ ನಾಯಕ ವಿ.ಸೋಮಣ್ಣ ಹೇಳಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ವಿ.ಸೋಮಣ್ಣ ಅವರು, ನನಗೆ ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜ್ ಅವರು ಮೊದಲಿನಿಂದಲೂ ಆತ್ಮೀಯರು. ಅವರಿಗೆ ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕೆಂದು ಅವರ ಉದ್ದೇಶವಾಗಿದೆ.
ಇನ್ನು ನಾನು ದೆಹಲಿಗೆ ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ. ಸಾಧ್ಯವಾದರೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತೇನೆ. ಇನ್ನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.