ನವದೆಹಲಿ,ಫೆ 07 (DaijiworldNews/AK): ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಆರೋಪ ಮಾಡಿದ್ದು, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ.
ಈಗಾಗಲೇ ಪ್ರತಿಭಟನೆಗಾಗಿ ಕಾಂಗ್ರೆಸ್ ಶಾಸಕರು, ಸಚಿವರು ಸೇರಿದಂತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ. ಆದರೆ ದೆಹಲಿಯ ಜಂತರ್ ಮಂತರ್ನಲ್ಲಿ ಕರ್ನಾಟಕ ಸರ್ಕಾರದ ಪ್ರತಿಭಟನೆಗೆ ದೆಹಲಿ ಪೊಲೀಸ್ ಕೇವಲ ಅರ್ಧ ಗಂಟೆ ಅವಕಾಶ ನೀಡಿದೆ.
ಇಂದು ಫೆಬ್ರವರಿ 07 ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡಲಿದ್ದಾರೆ. ಆದರೆ, ದೆಹಲಿ ಪೊಲೀಸರು ಮಧ್ಯಾಹ್ನ 12.30ರಿಂದ 1ರ ವರೆಗೆ ಮಾತ್ರ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದೆ.
ದೆಹಲಿಯ ಚಲೋ ಪಕ್ಷದ ಪ್ರತಿಭಟನೆಯಲ್ಲ. ಸರ್ಕಾರದ ಪ್ರತಿಭಟನೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬಿಜೆಪಿ ಮತ್ತು ಜೆಡಿಎಸ್ ಸಂಸದರು ಪ್ರತಿಭಟನೆಗೆ ಬರಬೇಕು ಅಂತ ಪತ್ರ ಬರೆದಿದ್ದಾರೆ. ದೇವೇಗೌಡರಿಗೂ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.
ಕನ್ನಡಿಗರ ಹಕ್ಕು, ಸ್ವಾಭಿಮಾನಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ರಾಜ್ಯದ ತೆರಿಗೆಯಲ್ಲಿ ಆಗುತ್ತಿರುವ ವಂಚನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಇದಕ್ಕೆ ಬೆಂಬಲಿಸುವಂತೆ ಕೋರಿದ್ದಾರೆ.