ನವದೆಹಲಿ, ಫೆ 08 (DaijiworldNews/HR): ಭಾರತದ ಆಂತರಿಕ ಭದ್ರತೆಗಾಗಿ ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಸಂಚಾರ ಒಪ್ಪಂದ (ಎಫ್ಎಂಆರ್)ವನ್ನು ರದ್ದುಗೊಳಿಸಲು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ‘‘ಮುಕ್ತ ಸಂಚಾರ ಒಪ್ಪಂದವನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೊಡಗಿದ್ದು, ಈ ಬಗ್ಗೆ ಗೃಹ ಸಚಿವಾಲಯ ಕೂಡ ಮುಕ್ತ ಸಂಚಾರ ಒಪ್ಪಂದವನ್ನು ತಕ್ಷಣ ರದ್ದುಗೊಳಿಸುವಂತೆ ಶಿಫಾರಸು ಮಾಡಿದೆ ಎಂದರು.
ಇನ್ನು ಮ್ಯಾನ್ಮಾರ್ ನ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ಸ್ವರೂಪವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದ್ದಾರೆ.