ಬೆಂಗಳೂರು, ಫೆ 09 (DaijiworldNews/ AK):ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಮಾರುಕಟ್ಟೆ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಒಂದು ಜಿಲ್ಲೆ, ಒಂದು ಉತ್ಪನ್ನ' ಯೋಜನೆಯಡಿ, ಕೇಂದ್ರ ಸರ್ಕಾರ ನೀಡುವ ಬಡ್ಡಿ ರಹಿತ ಸಾಲವನ್ನು ಬಳಸಿಕೊಂಡು 193 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನಲ್ಲಿ ಇಂಡಿಯಾ ಯೂನಿಟಿ ಮಾಲ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿರುವ 6.5 ಎಕರೆ ವಸ್ತುಪ್ರದರ್ಶನ ಭೂಮಿಯಲ್ಲಿ ಯೂನಿಟಿ ಮಾಲ್ ಯೋಜನೆಯನ್ನು ಸಣ್ಣ ಕೈಗಾರಿಕೆ ಇಲಾಖೆ ಕೈಗೆತ್ತಿಕೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.