ಕಲಬುರಗಿ, ಫೆ 10 (DaijiworldNews/HR): ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಿಟ್ ಅಂಡ್ ರನ್ ಮಾಡುವುದನ್ನು ಬಿಟ್ಟು ನಮ್ಮ ಸರಕಾರ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ನಾಗಮೋಹನ್ ದಾಸ್ ಸಮಿತಿಗೆ ನೀಡಲಿ ಆಗ ತನಿಖೆ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಿಟ್ ಅಂಡ್ ರನ್ ಮಾಡೋದು ಬಿಟ್ಟು ತಮ್ಮ ಸರಕಾರ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ನಾಗಮೋಹನ್ ದಾಸ್ ಸಮಿತಿಗೆ ನೀಡಲಿ, ತನಿಖೆ ಆಗುತ್ತದೆ ಎಂದರು.
ಇನ್ನು ಎಲ್ಲ ಅರೋಪಗಳ ತನಿಖೆ ನಡೆಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ ಎಂದಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದ್ದು, ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.