ಬೆಂಗಳೂರು, ಫೆ 10(DaijiworldNews/AK): ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ. ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ತಿರುಗೇಟು ನೀಡಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ ಡಿ.ಕೆ.ಸುರೇಶ್ ಅವರಿಗೆ ಗುಂಡಿಟ್ಟು ಕೊಲ್ಲುವ ಹೇಳಿಕೆ ನೀಡಿದ ಬಗ್ಗೆ ಕ್ಷಮೆ ಕೇಳುವಂತೆ ಈಶ್ವರಪ್ಪ ಅವರನ್ನು ಯಾರೂ ಕೇಳಿಲ್ಲ ಎಂದರು.
ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲಮೆಂಟ್ ಮಾಡಿದ್ದೇವೆ. ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ ? ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ ಎಂದು ಟಾಂಗ್ ನೀಡಿದರು.