ನವದೆಹಲಿ, ಫೆ 10 (DaijiworldNews/HR): ಪಂಜಾಬ್ ಮತ್ತು ಚಂಡೀಗಢದಲ್ಲಿಇಂಡಿಯಾ ಒಕ್ಕೂಟದೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಘೋಷಣೆಯಿಂದ ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಇನ್ನು ಈ ಮೊದಲು ನಿತೀಶ್ ಕುಮಾರ್ ಮೈತ್ರಿ ತೊರೆದು ಎನ್ಡಿಎ ಒಕ್ಕೂಟ ಸೇರಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡ ಮೈತ್ರಿಕೂಟದಿಂದ ಹೊರಬಂದಿದ್ದರು.