ಬೆಂಗಳೂರು, ಫೆ 10(DaijiworldNews/SK): ಆರೋಗ್ಯ ಜಾಗೃತಿಗಾಗಿ ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ನೀಡಲಾಗುವ 2024ನೇ ಸಾಲಿನ ನೆಲ್ಸನ್ ಮಂಡೇಲಾ ಪ್ರಶಸ್ತಿ ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಜಾನ ಸಂಸ್ಥೆ (ನಿಮ್ಹಾನ್ಸ್) ಭಾಜನವಾಗಿದೆ.
ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಪ್ರಚಾರದಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು , ಸಂಸ್ಥೆಗಳು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ೨೦೧೯ ರಲ್ಲಿ ಈ ಪ್ರಶಸ್ತಿಯನ್ನು ತರಲಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿದ ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಅವರು, ನೆಲ್ಸನ್ ಮಂಡೇಲಾ ಪ್ರಶಸ್ತಿ ಕರುನಾಡಿನ ನಿಮ್ಹಾನ್ಸ್ಗೆಲಭಿಸಿರುವುದು ಸಂತಸದ ವಿಷಯ. ನಿಮ್ಹಾನ್ಸ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಜನರಿಗೆ ತಿಳಿಸುವಲ್ಲಿ ಮತ್ತು ಪ್ರಚಾರ ಮಾಡುವಲ್ಲಿ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ.