ಚಿಕ್ಕಮಗಳೂರು, ಫೆ 11 (DaijiworldNews/PC): ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ, ಪಶ್ಚಿಮಘಟ್ಟ ಸಾಲು ಮುಳ್ಳಯ್ಯನಗಿರಿಗೆ ಹೊಂದಿಕೊಂಡಿರುವ ಚೆನ್ನಗೊಂಡನಹಳ್ಳಿ ಪ್ರದೇಶದಲ್ಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಅರಣ್ಯದಲ್ಲಿ ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿಯ ಕೆನ್ನಾಲಿಗೆ ಈಗಾಗಲೇ ಸಾಕಷ್ಟು ಅರಣ್ಯ ಪ್ರದೇಶವನ್ನು ವ್ಯಾಪಿಸಿದ್ದು. ಬಿಸಿಲ ಧಗೆ ಮತ್ತು ಗಾಳಿಯಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗದೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಜೊತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ.
ಪ್ರವಾಸಿಗರು ಮಾಡಿದ ಕಿಡಿ ಗೇಡಿತನದಿಂದ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕಾಡಾನೆಗಳ ಹಿಂಡು ಜಿಲ್ಲೆಯಲ್ಲಿ ಬೀಡು ಬಿಟ್ಟಿವೆ, ಚಿಕ್ಕೊಳಲೆಯಲ್ಲಿ ಬೀಡು ಬಿಟ್ಟಿರುವ ಆನೆಗಳು ಸ್ಥಳದಿಂದ ಕದಲುತ್ತಿಲ್ಲ, ಮತ್ತೊಂದು ಕಡೆ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಪ್ರವಾಸಿಗರು ಮಾಡಿರುವ ಕಿಡಿಗೇಡಿತನದಿಂದ ಪಶ್ಚಿಮ ಘಟ್ಟ ಪ್ರದೇಶದ ಮುಳ್ಳಯ್ಯನ ಗಿರಿ ಸಮೀಪದ ಚೆನ್ನಗೊಂಡ ನಹಳ್ಳಿ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು ದುರ್ಗಮ ಪ್ರದೇಶವಾಗಿರುವುದರಿಂದ ಬೆಂಕಿ ನಂದಿಸಲು ಕಷ್ಟವಾಗುತ್ತಿದೆ. ಗಾಳಿ ಮತ್ತು ಒಣಗಿದ ಮರಗಳ ಎಲೆಗಳಿಂದ ಬೆಂಕಿ ಸಾಕಷ್ಟು ವ್ಯಾಪಿಸುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದರು.