ನವದೆಹಲಿ, ಫೆ 12 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್ ನೀಡಿದೆ.
ಕಳೆದ ತಿಂಗಳು ಇದೇ ಪ್ರಕರಣದಲ್ಲಿ ಸಮನ್ಸ್ ನೀಡಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಅವರು ಶ್ರೀನಗರದಲ್ಲಿರುವ ಏಜೆನ್ಸಿಯ ಕಚೇರಿಗೆ ಹಾಜರಾಗಿರಲಿಲ್ಲ.
ಇನ್ನು ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನಂತರ ಲೋಕಸಭಾ ಚುನಾವಣೆಗಳಿಗೆ ಮುಂಚಿತವಾಗಿ ಅವರನ್ನು ವಿಚಾರಣೆಗಾಗಿ ಕರೆಸಿಕೊಳ್ಳುವ ಇತ್ತೀಚಿನ ವಿರೋಧ ಪಕ್ಷದ ನಾಯಕರಾಗಿದ್ದು, ಸೋರೆನ್ ಅವರನ್ನು ಈಗ ಬಂಧಿಸಲಾಗಿದೆ.
ಈ ಪ್ರಕರಣವು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ಅಥವಾ ಜೆಕೆಸಿಎಗೆ ಸೇರಿದ ಹಣವನ್ನು ಅಸೋಸಿಯೇಷನ್ನ ಪದಾಧಿಕಾರಿಗಳು ಸೇರಿದಂತೆ ವಿವಿಧ ಜನರ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.