ಚೆನ್ನೈ,ಫೆ(DaijiworldNews/SK): ಅಕ್ರಮ ಹಣದ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿ ಅವರು ಸೋಮವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳುವ ಎರಡು ದಿನಗಳ ಮುನ್ನ ರಾಜೀನಾಮೆ ನೀಡಿದ್ದಾರೆ.
ಕಳೆದ ವರ್ಷ ಜೂನ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಾಲಾಜಿ ಅವರ ನಿವಾಸ ಮತ್ತು ಚೆನ್ನೈ ಮತ್ತು ಕೊಯಮತ್ತೂರಿನಲ್ಲಿರುವ ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ದಾಳಿಯ ಸಮಯದಲ್ಲಿ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಾಲಾಜಿಯನ್ನು ಬಂಧಿಸಲಾಯಿತು ಮತ್ತು ವಿಚಾರಣೆಗಾಗಿ ಕರೆದೊಯ್ಯಲಾಯಿತು.ಅವರು ಎಂ.ಕೆ.ಸ್ಟಾಲಿನ್ ಸಂಪುಟದಲ್ಲಿ ಕಳೆದ ಎಂಟು ತಿಂಗಳುಗಳಿಂದ ಖಾತೆರಹಿತ ಸಚಿವರಾಗಿದ್ದರು.