ಹಾಸನ, ಫೆ (DaijiworldNews/SK): ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸ್ಥಾನದ ಬಗ್ಗೆ ಯಾವುದೇ ಗೊಂದಲವಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ನ ದುರಾಡಳಿತವನ್ನು ಕೊನೆಗಾಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಾಸನದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ ಅವರು, ಈ ಭ್ರಷ್ಟ ಸರ್ಕಾರವನ್ನು ತೆಗೆಯಬೇಕು, 28 ಕ್ಕೆ 28 ಲೋಕಸಭೆ ಕ್ಷೇತ್ರ ಗೆಲ್ಲಬೇಕು. ಸ್ಥಾನಗಳ ಹಂಚಿಕೆ ಎಷ್ಟು ಎನ್ನುವುದು ಮುಖ್ಯವಲ್ಲ ಎಂದಿದ್ದಾರೆ.
ಇನ್ನು ಈ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಆಗುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.