ಕೋಲ್ಕತಾ, ಫೆ 14 (DaijiworldNews/PC): ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಹಾಗೂ ಟಿಎಂಸಿ ವಿರುದ್ದ ಹೋರಾಟ ತೀವ್ರಗೊಳ್ಳುತ್ತಿದ್ದು ಈ ಸಮಯದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.
ಈ ವೇಳೆ ಗಂಭೀರ ಗಾಯಗೊಂಡ ಪಶ್ಚಿಮ ಬಂಗಾಳ ಅಧ್ಯಕ್ಷ ಸುಕಾಂತ ಮಜುಮ್ದಾರ್ ಆಸ್ಪತ್ರೆ ದಾಖಲಾಗಿದ್ದಾರೆ.
ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ಗ್ಯಾಂಗ್ ರೇಪ್, ಅಕ್ರಮ ಭೂ ಕಬಳಿಕೆ ವಿರುದ್ಧ ಸಂದೇಶ್ಖಾಲಿ ದ್ವೀಪ ಪ್ರದೇಶದ ಮಹಿಳೆಯರು ತಿರುಗಿಬಿದ್ದಿದ್ದಾರೆ.
ಈ ವಿಚಾರವಾಗಿ ಟಿಎಂಸಿ ವಿರುದ್ಧ ಬಿಜೆಪಿ ಭಾರಿ ಪ್ರತಿಭಟನೆ ನಡೆಸುತ್ತಿದೆ.
ಈ ದಾಳಿಯ ಸಮಯದಲ್ಲಿ ನಡೆಯುವ ಪೊಲೀಸರ ದಾಳಿಯಿಂದಾಗಿ ಸುಕಾಂತ ಮಜುಮ್ದಾರ್ ಜೊತೆಗೆ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಬಸಿರಟ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಕಾಂತ ಮಜುಮ್ದಾರ್ ಆರೋಗ್ಯ ಪರಿಸ್ಥಿತಿ ಕುರಿತು ನಿಘಾವಹಿಸಲಾಗಿದ್ದು ಆಸ್ಪತ್ರೆ ಮೂಲಗಳು ಮಜುಮ್ದಾರ್ ಆರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ.